ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ

newsics.com ಅಮರಾವತಿ/ತಿರುಪತಿ: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗಿ ವಿವಾದ ಸೃಷ್ಟಿಯಾಗಿರುವ ಕಾರಣ ತಿರುಮಲ ವೆಂಕಟೇಶ್ವರ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಈ ಬಗ್ಗೆ ಶನಿವಾರ ಅಧಿಕೃತ ಪ್ರಕಟಣೆ ನೀಡಿರುವ ನಾಯ್ಡು, ‘ಈಗ ಆಗಿರುವ ಅಪಚಾರವನ್ನು ಹೇಗೆ ಸರಿಪಡಿಸಬೇಕು ಎಂಬ ಬಗ್ಗೆ ನಾವು ಮಠಾಧೀಶರು, ಅರ್ಚಕರು ಮತ್ತು ಇತರ ಹಿಂದೂ ಧರ್ಮದ ಉನ್ನತ ಪಂಡಿತರೊಂದಿಗೆ ಸಮಾಲೋಚನೆ ಮಾಡುತ್ತೇವೆ. ಸಂಪ್ರೋಕ್ಷಣೆಯನ್ನು (ಶುದ್ಧೀಕರಣ) ಹೇಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸುತ್ತೇವೆ’ ಎಂದಿದ್ದಾರೆ. … Continue reading ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ