newsics.com
ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನನೀಡಿದೆ.
ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಈ ತೀರ್ಪು ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ತಳ್ಳಿಹಾಕಿದೆ.
ತೀರ್ಪು ನೀಡುವಲ್ಲಿ ಉಚ್ಚ ನ್ಯಾಯಾಲಯವು ಘೋರ ದೋಷ ಎಸಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
https://x.com/ANI/status/1838087539418386838?t=yyBBSpL4AidjoaGiyCNHRQ&s=19