newsics.com
ಯಾದಗಿರಿ: ಸಿಡಿಲು ಬಡಿದು ನಾಲ್ವರು ಮೃತಪಟ್ಟಿರುವ ಘಟನೆ
ತಾಲೂಕಿನ ಜೀನಕೇರಿ ತಾಂಡಾದಲ್ಲಿ ಸೋಮವಾರ ನಡೆದಿದೆ.
ಚೇನು (೨೨) ಕಿಶನ್ (೩೦) ಸುಮಿ ಬಾಯಿ (೩೦) ಮೃತಪಟ್ಟವರು. ತಾಂಡಾದ ಜಮೀನಿನಲ್ಲಿ ಈರುಳ್ಳಿ ನಾಟಿ ಮಾಡುತ್ತಿರುವ ಸಂದರ್ಭದಲ್ಲಿ ಮಳೆ ಬಂದಿದ್ದರಿಂದ ತಪ್ಪಿಸಿಕೊಳ್ಳಲು ಸಮೀಪದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಪ್ಪಳಿಸಿದ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಇವರ ಜತೆ ಮೂವರಿಗೆ ಗಂಭೀರ ಗಾಯಗಳಾಗಿವೆ. ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.