ಸಿಎಂ ವಿರುದ್ಧದ ಪ್ರಾಸಿಕ್ಯೂಷನ್: ಹೈಕೋರ್ಟ್ ತೀರ್ಪು ನಾಳೆ

newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಕುರಿತ ಹೈಕೋರ್ಟ್ ತೀರ್ಪು ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆಯ ಬಳಿಕ ಹೈಕೋರ್ಟ್‌ನ ನ್ಯಾ.ನಾಗಪ್ರಸನ್ನ ಪೀಠ ತೀರ್ಪು ಕಾಯ್ದಿರಿಸಿತ್ತು. ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ … Continue reading ಸಿಎಂ ವಿರುದ್ಧದ ಪ್ರಾಸಿಕ್ಯೂಷನ್: ಹೈಕೋರ್ಟ್ ತೀರ್ಪು ನಾಳೆ