Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧ ಮನಸ್ತಾಪವೇ ಮಹಿಳೆಯನ್ನು 50 ತುಂಡಾಗಿಸಲು ಕಾರಣ: ನಾಲ್ವರ ಮೇಲೆ ಪೊಲೀಸರ ಶಂಕೆ, ಸ್ನೇಹಿತನ ವಿಚಾರಣೆ
ಕರ್ನಾಟಕಪ್ರಮುಖ

ಅನೈತಿಕ ಸಂಬಂಧ ಮನಸ್ತಾಪವೇ ಮಹಿಳೆಯನ್ನು 50 ತುಂಡಾಗಿಸಲು ಕಾರಣ: ನಾಲ್ವರ ಮೇಲೆ ಪೊಲೀಸರ ಶಂಕೆ, ಸ್ನೇಹಿತನ ವಿಚಾರಣೆ

Share
2 Min Read
SHARE

newsics.com

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆಗೆ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಸಂಬಂಧ ಮೃತಳ ಸ್ನೇಹಿತನೊಬ್ಬನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಅಲ್ಲದೆ ಹೇರ್ ಕಟಿಂಗ್ ಸಲೂನ್‌ನ ಸ್ಪೆಷಲಿಸ್ಟ್ ಸೇರಿ ನಾಲ್ವರ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ಮೃತಳ ಮನೆ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಆಕೆಯ ಮೊಬೈಲ್ ಕರೆಗಳನ್ನು ಪರಿಶೀಲಿಸಿದಾಗ ಹಂತಕನ ಸುಳಿವು ಪೊಲೀಸರಿಗೆ ಸಿಕ್ಕಿದೆ.

ಈ ಕೃತ್ಯವನ್ನು ಮೃತಳ ಆತ್ಮೀಯ ಸ್ನೇಹಿತನೇ ನಡೆಸಿರುವುದು ಖಚಿತವಾಗಿದ್ದು, ಶಂಕೆ ಮೇರೆಗೆ ಆಕೆಯ ಆಪ್ತ ಒಡನಾಡಿಗಳನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಮ್ಮ ಪತಿಯಿಂದ ಒಂಬತ್ತು ತಿಂಗಳ ಹಿಂದೆಯೇ ಪ್ರತ್ಯೇಕವಾಗಿದ್ದ ಮಹಾಲಕ್ಷ್ಮೀ, ನಂತರ ವೈಯಾಲಿಕಾವಲ್ ಸಮೀಪ ಪ್ರತಿಷ್ಠಿತ ಮಾರಾಟ ಮಳಿಗೆಯಲ್ಲಿ ಸೇಲ್ಸ್ ಗರ್ಲ್ಸ್‌ ಆಗಿದ್ದಳು. ಈ ವೇಳೆ ಆಕೆಗೆ ಯುವಕನ ಜತೆ ಸ್ನೇಹ ಬೆಳೆದಿತ್ತು. ಈ ಸ್ನೇಹದಲ್ಲಿ ಮೂಡಿದ ಮನಸ್ತಾಪವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ತನ್ನ ಪತಿಯಿಂದ ದೂರವಾಗಿದ್ದ ಕಾರಣಕ್ಕೆ ಮಹಾಲಕ್ಷ್ಮೀ ಜತೆ ಆಕೆಯ ಪೋಷಕರು ಸಹ ಮುನಿಸಿಕೊಂಡಿದ್ದರು. ಹೀಗಾಗಿ ವೈಯಾಲಿಕಾವಲ್‌ನಲ್ಲಿ ಆಕೆ ಏಕಾಂಗಿಯಾಗಿ ನೆಲೆಸಿದ್ದಳು. ತನ್ನ ಸಹೋದ್ಯೋಗಿಗಳ ಜತೆ ಖುಷಿಯಿಂದಲೇ ಇದ್ದ ಆಕೆ, ತನ್ನ ವೈಯಕ್ತಿಕ ವಿಚಾರವನ್ನು ಯಾರೊಂದಿಗೂ ಹಂಚಿಕೊಳ್ಳುತ್ತಿರಲಿಲ್ಲ. ಸೆ.12ರಂದು ಆಕೆಯ ಮೊಬೈಲ್ ಸ್ವಿಚ್ಡ್‌ ಆಫ್ ಆಗಿದೆ. ಅಂದು ಆಕೆಯ ಮನೆಗೆ ಬಂದಿರುವ ಪರಿಚಿತನಿಂದಲೇ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಸಾವಿಗೂ ಮುನ್ನ ಗಲಾಟೆ?

ಮಹಾಲಕ್ಷ್ಮೀ ಮನೆಗೆ ಬಲವಂತವಾಗಿ ಆರೋಪಿ ಪ್ರವೇಶಿಸಿಲ್ಲ. ಅಲ್ಲದೆ ಹತ್ಯೆಗೂ ಮುನ್ನ ತನ್ನ ಮೇಲೆ ಹಲ್ಲೆ ನಡೆಸಲು ಮುಂದಾದ ಆರೋಪಿಗೆ ಮಹಾಲಕ್ಷ್ಮೀ ಪ್ರತಿರೋಧ ತೋರಿದ್ದಾಳೆ. ಆ ವೇಳೆ ಆತನ ಕೈ ಕಚ್ಚಿ, ಮೈ ಪರಚಿ ಆಕೆ ಗಲಾಟೆ ಮಾಡಿದ್ದಾಳೆ ಎಂಬುದು ಪ್ರಾಥಮಿಕ ಹಂತದ ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಮಾಂಸ ಕತ್ತರಿಸುವ ಚಾಕು

ತನಗೆ ತೀವ್ರ ಪ್ರತಿರೋಧಿಸಿದ್ದ ಮಹಾಲಕ್ಷ್ಮೀ ಮೇಲೆ ಸಿಟ್ಟಿಗೆದ್ದು ಚಾಕುವಿನಿಂದ ಇರಿದು ಬಳಿಕ ಮಾಂಸ ಕತ್ತರಿಸುವ ಚಾಕುವಿನಿಂದ ಆಕೆಯ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಆರೋಪಿ ಭೀಕರವಾಗಿ ಕೊಂದಿದ್ದಾನೆ ಎನ್ನಲಾಗಿದೆ.

ಬಿಡಿ ಬಿಡಿ ಭಾಗಳ ಆಯ್ದು ಪರೀಕ್ಷೆ

ಮಹಾಲಕ್ಷ್ಮೀ ಮೃತದೇಹವನ್ನು 50ಕ್ಕೂ ಹೆಚ್ಚು ತುಂಡಾಗಿಸಿ ಫ್ರಿಜ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದ. ಈ ಮೃತದೇಹದ ಭಾಗಗಳನ್ನು ಆಯ್ದು ಬಳಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ಕಳುಹಿಸಿದ್ದರು. ಚೀಲದಲ್ಲಿ ತುಂಬಿದ್ದ ದೇಹದ ಬಿಡಿ ಭಾಗಗಳನ್ನು ಮರು ಜೋಡಿಸಿ ಮರಣೋತ್ತರ ಪರೀಕ್ಷೆ ನಡೆಸುವುದು ವೈದ್ಯರಿಗೆ ಸವಾಲಾಗಿತ್ತು ಎಂದು ತಿಳಿದುಬಂದಿದೆ.

ಮೃತದೇಹ ಹಸ್ತಾಂತರ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಈ ವೇಳೆ ಮೃತಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಅತಿಯಾದ ಕೆಲಸದೊತ್ತಡ: ಮತ್ತೋರ್ವ ಟೆಕ್ಕಿ ಆತ್ಮ*ಹತ್ಯೆ

ನಿಮ್ಮ  ಹೆಂಡ್ತಿ ಜೊತೆ ಈ ವಿಷ್ಯ ಮಾತಾಡಿ! ತಾನೇ ಒಲಿತಾಳೆ

ವೈಟ್ ಬಿಕಿನಿ ಧರಿಸಿ ಪೋಸ್ ಕೊಟ್ಟ ಶಾನ್ವಿ ಶ್ರೀವಾತ್ಸವ್

TAGGED:police suspect fourquestion friendWoman hacked into 50 pieces due to resentment of adultery
Share This Article
Facebook Twitter Copy Link Print
Previous Article ಸಿಲಿಕಾನ್ ಸಿಟಿಯಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ
Next Article ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಕಿರೀಟ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?