newsics.com
ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಮುಡಾ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯ ತನ್ನ ತೀರ್ಪನ್ನು ಇಂದು ಮಧ್ಯಾಹ್ನ 12ಗಂಟೆಗೆ ತೀರ್ಪು ಪ್ರಕಟಿಸಲಿದೆ.
ಮುಡಾ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಇಂದು ಹೊರಬೀಳಲಿದೆ. ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ತೀರ್ಪು ಪ್ರಕಟಿಸಲಿದ್ದಾರೆ.
ಈಗಾಗಲೇ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದಾರೆ. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ.ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದಾರೆ.
ರಾಜ್ಯ ಹೈಕೋರ್ಟಿನ ತೀರ್ಪು ಏನೇ ಬರಲಿ ಎರಡೂ ಕಡೆಯವರು ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿರುವ ಮುಡಾ ಪ್ರಕರಣದ ತೀರ್ಪಿನ ಮೇಲೆ, ಇಡೀ ರಾಜ್ಯ ಕಣ್ಣಿಟ್ಟಿದೆ. ಒಂದು ವೇಳೆ, ತೀರ್ಪು ರಾಜಭವನದ ಪರವಾಗಿ ಬಂದರೆ, ರಾಜಕೀಯ ಚಟುವಟಿಕೆಗಳು ಜೋರಾಗಬಹುದು.