newsics.com
ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ನಿನ್ನೆ ತಡರಾತ್ರಿವರೆಗೂ ಡಿಸಿಎಂ ಡಿಕೆಶಿ ನಗರ ಪ್ರದಕ್ಷಿಣೆ ಮಾಡಿದರು.
ಡಿಕೆ.ಶಿವಕುಮಾರ್ ನಗರದ ಪ್ರಮುಖ ರಸ್ತೆಗಳಾಗ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು
ತಡರಾತ್ರಿ ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ ಡಿಸಿಎಂ, ಕಾಮಗಾರಿಗಳ ಸ್ಥಿತಿಗತಿಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದರು.