newsics.com
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಲಿರುವ ತೀರ್ಪು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧರಿಸಲಿದೆ.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್‌ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲಿಸರು ಅಲರ್ಟ್ ಆಗಿದ್ದು, ಪ್ರಮುಖವಾಗಿ ಸಿಎಂ ಕಾವೇರಿ ನಿವಾಸದ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 2 ಕೆಎಸ್‌ಆರ್‌ಪಿ ತುಕಡಿ, ಬಿಎಂಟಿಸಿ ಬಸ್‌ಗಳನ್ನು ನಿಯೋಜಿಸಲಾಗಿದೆ.
ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6 ಮಂದಿ ಬಂಧನ
ಸಿಕ್ಕಾಪಟ್ಟೆ ಬೋಲ್ಡ್ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು