ಹೈಕೋರ್ಟ್ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸ ಸೇರಿ ವಿವಿಧೆಡೆ ಪೊಲೀಸ್ ಬಿಗಿ ಭದ್ರತೆ

newsics.com ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಲಿರುವ ತೀರ್ಪು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧರಿಸಲಿದೆ. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್‌ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ … Continue reading ಹೈಕೋರ್ಟ್ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸ ಸೇರಿ ವಿವಿಧೆಡೆ ಪೊಲೀಸ್ ಬಿಗಿ ಭದ್ರತೆ