Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ಗೆ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಈ‌ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹಾಲ್ ನಂಬರ್ 17ರಲ್ಲಿ ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ.

ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್‌ನಲ್ಲಿ ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದರು. ರಾಜ್ಯಪಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ. ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದರು.
ತೀರ್ಪು ಪ್ರಕಟಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ(ಸೆ.24) ತೀರ್ಪು ಪ್ರಕಟವಾಗಿದ್ದು, ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದರು.

TAGGED:Muda Scam Prosecution: High Court Dismisses CM Siddaramaiah's Petition
Share This Article
Facebook Twitter Copy Link Print
Previous Article ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಳ, ಸಿಎಂಗೆ ನಿರಾಳವೋ ಸಂಕಷ್ಟವೋ?
Next Article ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?