newsics.com
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.
ಇದರ ಬೆನ್ನಲ್ಲೇ ಆರೋಪ ಮಾಡಿರುವ ಮಹಿಳೆಯೇ ನಾಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಮಹಿಳೆ ಪೊಲೀಸ್ ಠಾಣೆಗಳಿಗೆ ಅಲೆದಾಟ ನಡೆಸಿದ್ದಾರೆ.
ಠಾಣೆಯ ವಿಸಿಟರ್ ರಿಜಿಸ್ಟರ್ ಬುಕ್‌ನಲ್ಲಿ ಹೆಸರು, ವಿಳಾಸ ಬರೆದು ಹೋಗಿದ್ದಾರೆ. ಸದ್ಯ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.
ಮಠಕ್ಕೆ ಕಳೆದ 6 ತಿಂಗಳ ಹಿಂದೆ ಬಂದಿದ್ದ ಮಹಿಳೆ ಹಾಗೂ ಮಹಿಳೆಯ ಮಗಳು ಮೂಲತಃ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದ್ದು, ಸದ್ಯ ಮಹಿಳೆ ನಾಪತ್ತೆಯಾಗಿದ್ದಾರೆ.
ಸಿಎಂ ಸಿದ್ದುಗೆ ಸಾಲು ಸಾಲು ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ಮುಡಾ ವಿಚಾರಣೆ