newsics.com
ಬೆಂಗಳೂರು: ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು 6 ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ.
ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, 27 ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಣೆ ಮಾಡುವ ಎಚ್ಚರಿಕೆ ನೀಡಿದ್ದಾರೆ.