newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಪ್ರತಿಭಟನೆಗಿಳಿದಿದ್ದು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿವೆ.
ಅಲ್ಲದೇ, ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.