newsics.com
ಜಮ್ಮು- ಕಾಶ್ಮೀರ: ಇಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಘಟನೆ ನಡೆದಿದೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ. ಅವರ ರಕ್ತದೊತ್ತಡ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ ಎಂದು ಖರ್ಗೆಯವರ ಮಗ, ಸಚಿವ ಪ್ರಿಯಾಂಕ್ ಖರ್ಗೆ ತಮಚಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅಸ್ವಸ್ಥರಾದರು, ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ ಎಂದು ಹೇಳುತ್ತಾ ಕುಸಿದುಬಿದ್ದಿದ್ದಾರೆ.
ಅವರನ್ನು ಅಲ್ಲೇ ಪಕ್ಕದಲ್ಲಿದ್ದವರು ನೆಲಕ್ಕೆ ಬೀಳದಂತೆ ಹಿಡಿದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಕಳೆದ ವಾರಾಂತ್ಯದಲ್ಲಿ ಜಮ್ಮುವಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದರು, ಆದರೆ ನಿರಂತರ ಪ್ರಯಾಣದಿಂದ ಉಂಟಾದ ಆಯಾಸದಿಂದಾಗಿ ಹರ್ಯಾಣದಲ್ಲಿ ಕಾಂಗ್ರೆಸ್ ರ‌್ಯಾಲಿಗಳಲ್ಲಿ ಭಾಗವಹಿಸಿರಲಿಲ್ಲ ಎಂದು ವರದಿಯಾಗಿದೆ.
ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ ಸಜ್ಜಾಗುತ್ತಿದ್ದಂತೆ, ಪ್ರಚಾರಕ್ಕೆ ಭಾನುವಾರ ಕೊನೆಯ ದಿನವಾಗಿದೆ.
https://twitter.com/i/status/1840313742405300428
ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?
ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ