ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

newsics.com ಜಮ್ಮು- ಕಾಶ್ಮೀರ: ಇಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಘಟನೆ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ. ಅವರ ರಕ್ತದೊತ್ತಡ ಸ್ವಲ್ಪ‌ ಕಡಿಮೆಯಾಗಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ ಎಂದು ಖರ್ಗೆಯವರ ಮಗ, ಸಚಿವ ಪ್ರಿಯಾಂಕ್ ಖರ್ಗೆ ತಮಚಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ … Continue reading ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ