newsics.com
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ.
ಪಾಲಿಕೆಯು ಈ ದಿನದಂದು ಅಹಿಂಸೆಯ ತತ್ವಗಳನ್ನು ಗೌರವಿಸಲು ಮಾಂಸ ಮಾರಾಟ ಮತ್ತು ಪ್ರಾಣಿ ವಧೆ ನಿಷೇದ ನಿರ್ಧಾರವನ್ನು ತೆಗೆದುಕೊಂಡಿದೆ.
ಅ.2ರ ಬುಧವಾರದಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಅಹಿಂಸೆಯನ್ನು ಮಾರ್ಗದಲ್ಲಿ ನಡೆದ ಗಾಂಧಿ ಅವರ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳುರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯ ಎಲ್ಲ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.