newsics.com
ಬೆಂಗಳೂರು: ಟಿಪ್ಪರ್ ಲಾರಿ ಚಲಿಸಿ ಒಂದು ಲೈಟ್ ಕಂಬ ಹಾಗೂ ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ನಡೆದಿದೆ.
ಶನಿವಾರ ರಾತ್ರಿ 1.30 ಸುಮಾರಿಗೆ ಟಿಪ್ಪರ್ ಲಾರಿ ಚಾಲಕ, ಜಲ್ಲಿ ಕಲ್ಲು ಅನ್ ಲೋಡ್ ಮಾಡಲು ಟಿಪ್ಪರ್ ನಿಲ್ಲಿಸಿ ಜಲ್ಲಿ ಕಲ್ಲಿನ ಫೋಟೋ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಬ್ರೇಕ್ ಫೇಲ್ ಆಗಿ ಟಿಪ್ಪರ್ ಏಕಾಏಕಿ ಚಲಿಸಿದ್ದು, ರಸ್ತೆ ದಾಟಿ ಎದುರುಗಡೆಗೆ ಹೋಗಿ ಡಿಕ್ಕಿ ಹೊಡೆದಿದೆ.
ಜಖಂಗೊಂಡ ಲೈಟ್ ಕಂಬವನ್ನು ಬೆಸ್ಕಾಂ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಗಣೇಶ ವ್ಯಾಪಾರಿ ಚೇತನ್ ಕುಮಾರ್, ಗಣೇಶ ಮೂರ್ತಿಗೆ 75 ಸಾವಿರ ರೂಪಾಯಿ ಕೊಟ್ಟು ಬುಕಿಂಗ್ ಕೂಡ ಆಗಿದೆ. ಇವತ್ತು ಸಂಜೆ ತಗೊಂಡು ಹೋಗುತ್ತಿದ್ದರು. ಅಷ್ಟರಲ್ಲಿ ಮಧ್ಯರಾತ್ರಿ ಈ ರೀತಿಯಾಗಿದೆ. ಈ ಕುರಿತು ದೂರು ದಾಖಲು ಮಾಡಿದ್ದೇವೆ ಎಂದಿದ್ದಾರೆ.
ನೇಪಾಳ ಪ್ರವಾಹ: ಏರುತ್ತಲೇ ಇದೆ ಮೃತರ ಸಂಖ್ಯೆ, ಜನಜೀವನ ಅಸ್ತವ್ಯಸ್ತ, 3 ದಿನ ಶಾಲಾ ಕಾಲೇಜಿಗೆ ರಜೆ