ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

newsics.com ಜೈಪುರ್: ಐದನೇ ತರಗತಿಯ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜಸ್ಥಾನದ ಸರ್ಕಾರಿ‌ ಶಾಲೆ ಶಿಕ್ಷಕನನ್ನು ಟೋಂಕ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. 5ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರ ಕುಟುಂಬದವರು ಖುರೇಷಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.