ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

newsics.com ಚೆನ್ನೈ: ದಿಢೀರ್ ಅಸ್ವಸ್ಥತೆ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 73 ವರ್ಷದ ನಟನ ಪ್ರಸ್ತುತ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ಅವರ ಜೈಲರ್ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಅವರು ಹೊಟ್ಟೆನೋವಿನ ಕಾರಣ ಸೋಮವಾರ ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ. ಇಂಟರ್ವೆನ್ಷನಲ್ ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. … Continue reading ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು