Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್‌ನಿಂದ ಚೈತ್ರಾ ಕುಂದಾಪುರ ಕೈಬಿಡುವಂತೆ ಚಾನಲ್‌ಗೆ ವಕೀಲರ ನೋಟಿಸ್
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್‌ನಿಂದ ಚೈತ್ರಾ ಕುಂದಾಪುರ ಕೈಬಿಡುವಂತೆ ಚಾನಲ್‌ಗೆ ವಕೀಲರ ನೋಟಿಸ್

Share
1 Min Read
SHARE

newsics.com

ಸಾಗರ(ಶಿವಮೊಗ್ಗ): ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್ ಸೀಸನ್‌ ಕನ್ನಡ 11 ಕಾರ್ಯಕ್ರಮದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಕಲರ್ಸ್ ವಾಹಿನಿಗೆ ವಕೀಲರೊಬ್ಬರು ನೋಟಿಸ್ ಕಳುಹಿಸಿದ್ದಾರೆ.

ಸಾಗರದ ವಕೀಲ ಭೋಜರಾಜ್ ಎಂಬುವರು ಕಲರ್ಸ್ ಕನ್ನಡಕ್ಕೆ ಬರೆದಿರುವ ಪತ್ರ ವೈರಲ್ ಆಗಿದೆ, ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರ ಭವಿಷ್ಯ ತೂಗುಯ್ಯಾಲೆಯಲ್ಲಿದೆ.

ಚೈತ್ರಾಳನ್ನು ಕೂಡಲೇ ಬಿಗ್‌ಬಾಸ್ ಮನೆಯಿಂದ ಹೊರ ಕಳುಹಿಸಬೇಕು. ಇಲ್ಲವಾದರೆ ವಾಹಿನಿ ವಿರುದ್ದ ಕಾನೂನು ಕ್ರಮ ಜರುಗಿಸುವುದಾಗಿ ವಕೀಲರು ಎಚ್ಚರಿಸಿದ್ದಾರೆ.

ಚೈತ್ರಾ ವಿರುದ್ದ ಗಲಾಟೆ, ದೊಂಬಿ, ಜೀವ ಬೆದರಿಕೆ ಹಾಗೂ ವಂಚನೆ ಮುಂತಾದ ಪ್ರಕರಣಗಳು ದಾಖಲಾಗಿದ್ದು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿರುವ ಬಗ್ಗೆ ನೋಟಿಸ್‌ನಲ್ಲಿ ವಕೀಲರು ಪ್ರಶ್ನಿಸಿದ್ದಾರೆ.

ಚೈತ್ರಾಳ ವಿರುದ್ಧ ಸಾಕಷ್ಟು ಪ್ರಕರಣಗಳಿದ್ದು, ನನಗೆ ಆಕೆಯೊಂದಿಗೆ ವೈಯಕ್ತಿಕವಾಗಿ ಯಾವುದೇ ವೈಷಮ್ಯವಿಲ್ಲ. ಆದರೆ ಆಕೆಯನ್ನು ಸ್ಪರ್ಧಿಯಾಗಿ ಮುಂದುವರಿಸಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಈ ಕೂಡಲೇ ಬಿಗ್‌ಬಾಸ್ ಮನೆಯಿಂದ ಹೊರಕಳಿಸುವಂತೆ ನೋಟಿಸ್‌ನಲ್ಲಿ ಆಗ್ರಹಿಸಿದ್ದಾರೆ.

ಬಿಗ್‌ಬಾಸ್‌ನಲ್ಲಿ ನಟ ಸುದೀಪ್ ಅವರು ಚೈತ್ರಾಳನ್ನು “ಹಿಂದೂ fire brand” ಎಂದು ಹೊಗಳಿದ್ದಾರೆ. ಮಾತ್ರವಲ್ಲ‌, ಈಗಾಗಲೇ ಚೈತ್ರಾಳ ವಿರುದ್ಧ ಸುಮಾರು 11 ಕೇಸ್‌ಗಳು ದಾಖಲಾಗಿವೆ. ‘ಹಿಂದಿನ ಸೀಸನ್ ನಡೆಯುವ ಸಂದರ್ಭದಲ್ಲಿ ಜೈಲಿನಲ್ಲಿ ಇದ್ದುಕೊಂಡು ಬಿಗ್‌ಬಾಸ್ ವೀಕ್ಷಣೆ ಮಾಡಿದ್ದೇನೆ’ ಎಂದು ಚೈತ್ರಾ ಹೇಳಿರುವುದು ಪ್ರೇಕ್ಷಕರಿಗೆ ಮುಜುಗರವುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಕಲರ್ಸ್ ಚಾನಲ್ ಟಿಆರ್‌ಪಿಗಾಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವುದು, ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಈ ನೋಟಿಸ್ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ, ಚೈತ್ರಾಳನ್ನು ಈ ನೋಟಿಸ್ ನ ಪ್ರತಿಯ ಇಮೇಲ್ ತಲುಪಿದ ತಕ್ಷಣವೇ ಸ್ಪರ್ಧೆಯಿಂದ ತೆಗೆದುಹಾಕಬೇಕು. ಇಲ್ಲದಿದ್ದಲ್ಲಿ ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೋಸರಾಜ್ ಹೇಳಿದ್ದಾರೆ.

BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ

ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ

BMTC ಬಸ್‌ನಲ್ಲಿ ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿದ ಪ್ರಯಾಣಿಕ; ವಿಡಿಯೋ ವೈರಲ್

TAGGED:Lawyer notice to channel to drop Chaitra Kundapur from Bigg Boss
Share This Article
Facebook Twitter Copy Link Print
Previous Article ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ
Next Article ಬಿಹಾರ: ಸೇನಾ ಹೆಲಿಕಾಪ್ಟರ್ ನೀರಿನಲ್ಲಿ ಪತನ 

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?