newsics.com
ನವದೆಹಲಿ: ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು ಸಂಗ್ರಹಿಸುವಂತೆ ಕೊಯಮತ್ತೂರು ಪೊಲೀಸರಿಗೆ ನಿರ್ದೇಶನ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಶಾ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮುಂದೆ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸೂಚಿಸಿದೆ.
ಅಲ್ಲದೆ ಇಶಾ ಫೌಂಡೇಶನ್‌ನಲ್ಲಿರುವ ತಮ್ಮ ಇಬ್ಬರು ಪುತ್ರಿಯರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಡಾ ಎಸ್ ಕಾಮರಾಜ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ತನಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್ ಗೆ ಸೂಚಿಸಿದೆ.