newsics.com
ಇಂಫಾಲ್: ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಎಲ್ಲ 16 ಜಿಲ್ಲಾ ಪೊಲೀಸ್ ವರಿಷ್ಠರಿಗೆ ಗೃಹ ಇಲಾಖೆ ಸೂಚಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಬುಧವಾರ ಎರಡು ನಾಗಾ ಗ್ರಾಮಗಳ ನಿವಾಸಿಗಳ ನಡುವೆ ಘರ್ಷಣೆ ನಡೆದಿದೆ. ಎರಡು ಗ್ರಾಮಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗುಂಡಿನ ಕಾಳಗದಲ್ಲಿ ಮಣಿಪುರ ರೈಫಲ್ಸ್ ಸೈನಿಕ ಸೇರಿದಂತೆ ಮೂವರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವರದಿಯಾದ ಬಳಿಕ ಮಣಿಪುರ ಪೊಲೀಸರು ಎಲ್ಲಾ 16 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗೆ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.