newsics.com
ಬೆಂಗಳೂರು : ಬೆಂಗಳೂರಿನ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಆಯಾ ಸಂಸ್ಥೆಯ ಪ್ರಾಂಶುಪಾಲರ ಅಧಿಕೃತ ಇಮೇಲ್ ಐಡಿಗಳಿಗೆ ಬೆಳಗ್ಗೆ 7.19ಕ್ಕೆ ಇಮೇಲ್ ಕಳುಹಿಸಲಾಗಿದೆ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಸವನಗುಡಿಯ ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ (ಬಿಎಂಎಸ್‌ಸಿಇ) ಮತ್ತು ರಾಮಯ್ಯ ಕಾಲೇಜಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಈ ಸಂಬಂಧ ವಿವಿ ಪುರಂ, ಹನುಮಂತನಗರ ಹಾಗೂ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.