newsics.com
ಬೆಂಗಳೂರು :ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ನಿಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ರಕ್ಷಿತಾ ಸಿಂಗ್ ಎನ್ನುವವರು ದೂರು ನೀಡಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಆರೋಪಿಸಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲಾಗಿದೆ. ವಕೀಲೆ ರಕ್ಷಿತಾ ಸಿಂಗ್ ಅವರು ನೀಡಿರುವ ದೂರಿನಲ್ಲಿ, ರಿಯಾಲಿಟಿ ಶೋ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಆವೃತ್ತಿ ದಿನಾಂಕ 29-9-2024ರಿಂದ ಆರಂಭವಾಗಿರುತ್ತದೆ. ಬಿಗ್ ಬಾಸ್ ಶೋನಲ್ಲಿ ಮನರಂಜನಾ ಕ್ಷೇತ್ರದಲ್ಲಿ ಮತ್ತು ಇತರ ಕ್ಷೇತ್ರಗಳಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಒಂದು ಮನೆಯಲ್ಲಿ ಕೂಡಿಹಾಕಿ ಆಡಿಸುವ ಸೈಕಾಲಾಜಿಕಲ್ ಗೇಮ್ ಶೋ ಆಗಿದೆ. ಬಿಗ್ ಬಾಸ್ ನಲ್ಲಿ ಹಲವು ರೀತಿಯ ಮಾನಸಿಕ, ದೈಹಿಕ ಟಾಸ್ಕ್ ಗಳನ್ನು ಕಂಟೆಸ್ಟೆಂಟ್ ಗಳಿಗೆ ನೀಡಲಾಗುತ್ತದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಇನ್ನೊಬ್ಬರ ಮೇಲೆ ಹಲವು ರೀತಿಯಲ್ಲಿ ಅಕ್ರಮಣ ಮಾಡುವ ಅನಿವಾರ್ಯತೆಯನ್ನು ಸೃಷ್ಟಿಸಲಾಗುತ್ತದೆ
ಮಹಿಳಾ ಆಯೋಗಕ್ಕೆ ದೂರು ನೀಡಿರುವ ರಕ್ಷಿತಾ ಸಿಂಗ್ ಅವರು ಸ್ವತಃ ವಕೀಲರಾಗಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11 ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದನ್ನು ಸಾರ್ವಜನಿಕರಿಗೆ ತೋರಿಸುವ ಮೂಲಕ ಮಹಿಳಾ ಸ್ವಾತಂತ್ರ್ಯ ಹರಣ ಮತ್ತು ಹಕ್ಕುಗಳನ್ನು ಮೊಟಕು ಮಾಡಲಾಗುತ್ತಿದೆ. ಸಾರ್ವಜನಿಕವಾಗಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತಿದೆ. ಮುಖ್ಯವಾಗಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ಬರುತ್ತಿದೆ ಎಂದು ವಕೀಲೆ ರಕ್ಷಿತಾ ಸಿಂಗ್ ನೀಡಿರುವ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.