newsics.com
ಮುಂಬೈ: ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಧನಗರ್ ಸಮುದಾಯಕ್ಕೆ ST ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದನ್ನು ವಿರೋಧಿಸಿ ಆಡಳಿತ ಮತ್ತು ಪ್ರತಿಪಕ್ಷದ 7-8 ಮಂದಿ ಶಾಸಕರು ಮೂರನೇ ಮಹಡಿಯಿಂದ ಜಿಗಿದು ಪ್ರತಿಭಟಿಸಿದ್ದಾರೆ. ಈ ನಾಯಕರು ನೇರವಾಗಿ ಅಳವಡಿಸಲಾಗಿದ್ದ ಬಲೆಗೆ ಬಿದ್ದ ಕಾರಣ ಪಾರಾಗಿದ್ದಾರೆ.
ಧಂಗರ್ ಸಮುದಾಯವನ್ನು ಎಸ್ಸಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವ ನರಹರಿ ಜಿರ್ವಾಲ್ ಅವರು ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ. ಇದರಿಂದ ಕೋಪಗೊಂಡು ತೀವ್ರ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.
ಛಾವಣಿಯಿಂದ ಕೆಳಗೆ ಜಿಗಿದ ನಂತರ ನೆಟ್ ನಲ್ಲಿ ಸಿಲುಕಿದ್ದ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರನ್ನು ಪೊಲೀಸರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲಿನಿಂದ ಜಿಗಿದ ಡೆಪ್ಯೂಟಿ ಸ್ಪೀಕರ್ ಜಿರ್ವಾಲ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯರಾಗಿದ್ದಾರೆ.