newsics.com
ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. . ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್ಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.
ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ. ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.
ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ. ‘ಬ್ರೋ..’ ‘ಬ್ರೋ..’ ಎಂದಷ್ಟೇ ಹೇಳಿದರು. ‘ಬ್ರೋ ಪ್ಯಾಂಟೀಸ್ ಎಲ್ಲ ನೋಡಿದೀನಿ. ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ . ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ‘ನಿಜವಗಾಲೂ ಇನ್ಸೆಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.
ವಾರದಲ್ಲಿ ದಂಪತಿ ಎಷ್ಟು ಬಾರಿ ಲೈಂಗಿಕ ಸಂಪರ್ಕ ಹೊಂದಬಹುದು? ಅಧ್ಯಯನ ವರದಿ ಹೇಳೋದೇನು?