newsics.com
ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿ ಎಂದು ಪ್ರಾರ್ಥಿಸಿದ ಅಭಿಮಾನಿಗಳು ಮತ್ತು ಆತ್ಮೀಯರಿಗೆ ಸೂಪರ್‌ಸ್ಟಾರ್ ರಜನಿಕಾಂತ್ ಕೃತಜ್ಞತೆ ಸಲ್ಲಿಸಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಟ್ವೀಟ್ ಮಾಡಿರುವ ಸೂಪರ್ ಸ್ಟಾರ್, ನಾನು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಮಿತ್ರರಿಗೆ, ನನ್ನ ಎಲ್ಲಾ ಚಿತ್ರರಂಗದ ಗೆಳೆಯರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮದವರಿಗೆ, ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನನ್ನು ಪ್ರೀತಿಸುವ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆ ಎಂದು ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ರಜನಿಕಾಂತ್ ಅವರನ್ನು ಸೆ.30 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ರಾನ್ಸ್‌ಕ್ಯಾಥೆಟರ್ ವಿಧಾನವನ್ನು ಬಳಸಿ ಚಿಕಿತ್ಸೆ ನೀಡಲಾಯಿತು.