newsics.com
ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ಪಂಜಾಬ್ ನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ.ಗಂಭೀರ ಗಾಯಗೊಂಡಿರುವ ಮುಖಂಡನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಎಪಿ ಮುಖಂಡನೊಂದಿಗೆ ವಾಗ್ವಾದದ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಗುಂಡು ಹಾರಿಸಿದ್ದಾರೆಂದು ಹೇಳಲಾಗಿದೆ.
ಬುಲೆಟ್‌ನಿಂದ ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಚಿಕಿತ್ಸೆಗಾಗಿ ಲುಧಿಯಾನದ ಜಿಲ್ಲಾ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಬುಲೆಟ್ ಅನ್ನು ಅಕಾಲಿ ನಾಯಕ ವರದೇವ್ ಸಿಂಗ್ ಮಾನ್ ಹಾರಿಸಿದ್ದಾರೆ ಎಂದು ಜಲಾಲಾಬಾದ್ ಎಎಪಿ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ ಆರೋಪಿಸಿದ್ದಾರೆ. ಬ್ಲಾಕ್ ಅಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿ (ಬಿಡಿಪಿಒ) ಕಚೇರಿಯ ಹೊರಗೆ ಘಟನೆ ನಡೆದಿದೆ.