newsics.com
ರಾಮನಗರ : ರಾಮನಗರದ ಶ್ರೀದೇವಿ ಮಿಷನ್ ಆಸ್ಪತ್ರೆಯಲ್ಲಿ ವೃಷಣ ಶಸ್ತ್ರಚಿಕಿತ್ಸೆ ನಂತರ 6 ವರ್ಷದ ಆರ್ಯ ಸಾವನ್ನಪ್ಪಿರುವ ಘಟನೆ ನಡೆದಿದೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಬಾಲಕ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿ, ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಹಾಗೂ DySP ದಿನಕರ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಂದೇ ವೃಷಣ ಹೊಂದಿದ್ದ ಆರ್ಯನನ್ನ ಹಲವು ಆಸ್ಪತ್ರೆಗಳ ವೈದ್ಯರಿಗೆ ತೋರಿಸಿದ್ದ ಪೋಷಕರು, ಬಳಿಕ ಶ್ರೀದೇವಿ ಮಿಷನ್ ಆಸ್ಪತ್ರೆಯ ವೈದ್ಯರು ನೀಡಿದ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆಗೆಂದು ಕರೆತರಲಾಗಿತ್ತು.
ವೈದ್ಯರ ನಿರ್ಲಕ್ಷ್ಯದಿಂದಲೇ ಬಾಲಕ ಮೃತಪಟ್ಟಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.