newsics.com
ಬೆಂಗಳೂರು : ಲೈಂಗಿಕ ದೌರ್ಜನ್ಯ, ಫೋಕ್ಸೋ ಪ್ರಕರಣದಲ್ಲಿ ಬಂಧನದಲ್ಲಿದ್ದ ಶಿವಮೂರ್ತಿ ಮುರುಘಾ ಸ್ವಾಮೀಜಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಮುರುಘಾ ಶ್ರೀ ಇಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಹೊರ ಬಂದಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ನಗು, ನಗುತ್ತಲೇ ಹೊರ ಬಂದರು. ಮುರುಘಾ ಶ್ರೀ ಹೊರ ಬರುತ್ತಿದ್ದಂತೆ ಬಸವಪ್ರಭು ಶ್ರೀಗಳು ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಜೈಲಿನಿಂದ ಹೊರಗಡೆ ಇದ್ದ ಭಕ್ತರು ಹೂವಿನ ಹಾರ ಹಾಕಿ ಜೈಕಾರ ಕೂಗಿ ಸಂಭ್ರಮದಿಂದ ಬರಮಾಡಿಕೊಂಡರು.