newsics.com
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚಿಕ್ಕನಹಳ್ಳಿ ಗ್ರಾಮದ ನಿವಾಸಿ 50 ವರ್ಷದ ಮಂಜಮ್ಮ ಮೃತ ಮಹಿಳೆಯಾಗಿದ್ದಾರೆ. ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ದುರ್ಘಟನೆ ನಡೆದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದ್ದು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.