Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೇರು ಉದ್ಯಮಿಗೆ ಭಾವನಾತ್ಮಕ ವಿದಾಯ: ಜನಮಾನಸದ ನೆನಪಿನಂಗಳಕ್ಕೆ ಜಾರಿದ ಭಾರತದ ರತ್ನ ಟಾಟಾ
ದೇಶಪ್ರಮುಖ

ಮೇರು ಉದ್ಯಮಿಗೆ ಭಾವನಾತ್ಮಕ ವಿದಾಯ: ಜನಮಾನಸದ ನೆನಪಿನಂಗಳಕ್ಕೆ ಜಾರಿದ ಭಾರತದ ರತ್ನ ಟಾಟಾ

Share
1 Min Read
SHARE

newsics.com

ಮುಂಬೈ: ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ ರತನ್ ಟಾಟಾ ಗುರುವಾರ ಸಂಜೆ ಪಂಚಭೂತಗಳಲ್ಲಿ ಲೀನರಾದರು.

ಈ‌ ಮೂಲಕ ಜನೋಪಕಾರಿ ಮೇರು ಉದ್ಯಮಿ, ಭಾರತದ ರತ್ನ ರತನ್ ಟಾಟಾ ಜನಮಾನಸದ ನೆನಪಿನಂಗಳಕ್ಕೆ ಜಾರಿದರು.
ಪಾರ್ಸಿ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತಾದರೂ ರತನ್ ಟಾಟಾ ಅವರ ಇಚ್ಛೆಯಂತೆ ಪಾರ್ಥಿವ ಶರೀರವನ್ನು ದಹನ ಮಾಡಲಾಯಿತು ಎಂದು ಸ್ಮಶಾನದಲ್ಲಿದ್ದ ಅರ್ಚಕರೊಬ್ಬರು ತಿಳಿಸಿದ್ದಾರೆ.
ಧೀಮಂತ ಉದ್ಯಮಿ-ಪರೋಪಕಾರಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಮುಂಬೈನ ವರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನೆರವೇರಿಸಲಾಯಿತು. ಈ ವೇಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನಡೆದವು. ಮುಂಬೈ ಪೊಲೀಸರು ಟಾಟಾ ಅವರಿಗೆ ಗನ್ ಸೆಲ್ಯೂಟ್ ಮೂಲಕ ಗೌರವ ಸಲ್ಲಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ವಾಣಿಜ್ಯ ಸಚಿವ ಪೀಯುಶ್ ಗೋಯಲ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮೊದಲಾದ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಅಂತ್ಯಕ್ರಿಯೆಯ ನಂತರ, ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ದಿವಂಗತ ಕೈಗಾರಿಕೋದ್ಯಮಿಯ ಬಂಗಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದು ಎಂದು ಅರ್ಚಕರು ತಿಳಿಸಿದರು.

ಮಲಸಹೋದರ ನೋಯೆಲ್ ಟಾಟಾ ಸೇರಿದಂತೆ ಉದ್ಯಮ ದಿಗ್ಗಜರ ಕುಟುಂಬದ ಸದಸ್ಯರು ಮತ್ತು ಟಾಟಾ ಗ್ರೂಪ್‌ನ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರಂತಹ ಉನ್ನತ ಅಧಿಕಾರಿಗಳು ವರ್ಲಿಯಲ್ಲಿರುವ ಸ್ಮಶಾನದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರ ಸರ್ಕಾರ ರತನ್ ಟಾಟಾಗೆ ಗೌರವಾರ್ಥ ಒಂದು ದಿನ ಶೋಕಾಚರಣೆ ಘೋಷಿಸಿತ್ತು. ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಕೇಂದ್ರದಲ್ಲಿ ರತನ್ ಟಾಟಾ ಅವರ ಪಾರ್ಥೀವ ಶರೀರದ ದರ್ಶನ ಪಡೆಯಲು ಸಾಗರದಂತೆ ಜನರು ಸೇರಿದ್ದರು.
ಅವಿವಾಹಿತರಾಗಿರುವ ರತನ್ ಟಾಟಾ ಅವರಿಗೆ ಮಕ್ಕಳಿಲ್ಲ. ಅವರ ತಂದೆಯ ಎರಡನೇ ಪತ್ನಿಯ ಮಗನ ಮೂವರು ಮಕ್ಕಳಲ್ಲಿ ಒಬ್ಬರಿಗೆ ಟಾಟಾ ಗ್ರೂಪ್ ಚುಕ್ಕಾಣಿ ಸಿಗಬಹುದು ಎನ್ನಲಾಗುತ್ತಿದೆ.

ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!

ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು

ರತನ್ ಟಾಟಾ ಆರೋಗ್ಯದಲ್ಲಿ ಏನೆಲ್ಲ ಸಮಸ್ಯೆಗಳು ಆಗಿತ್ತು..?

55 ವರ್ಷ ಕಿರಿಯ ವ್ಯಕ್ತಿ ಜತೆ ರತನ್‌ ಟಾಟಾ ಸ್ನೇಹ! ಆಪ್ತ ಗೆಳೆಯನ ನಡುವಿನ ಬಂಧ ಶುರುವಾಗಿದ್ದು ಹೇಗೆ..?

TAGGED:An emotional farewell to a veteran businessman
Share This Article
Facebook Twitter Copy Link Print
Previous Article ಕಲಬುರಗಿ: ಸೈಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು
Next Article ಬೆಂಗಳೂರಿನೊಂದಿಗೆ ರತನ್ ಟಾಟಾಗಿತ್ತು ಬಲವಾದ ನಂಟು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?