ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

newsics.com ಮುಂಬೈ: ದೇಶದ ಖ್ಯಾತ, ಶ್ರೇಷ್ಠ ಉದ್ಯಮಿ, ಪದ್ಮವಿಭೂಷಣ ಪುರಸ್ಕೃತ ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿದ್ದರು. ಆದರೆ, ಬುಧವಾರ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. … Continue reading ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ