newsics.com
ಬೆಂಗಳೂರು: ಮಹಿಳೆಯು ಬಟ್ಟೆ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದರು ಎಂಬ ಕಾರಣಕ್ಕಾಗಿ ಆಸಿಡ್ ಎರಚುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯ ವ್ಯಕ್ತಿಯೊಬ್ಬರನ್ನು ಕೆಲಸದಿಂದ ವಜಾ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸದಂತೆ ನಿಕಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯ ಪತಿ ದೂರು ದಾಖಲಿಸಿದ ನಂತರ ವ್ಯಕ್ತಿ ನಿಕಿತ್ ಶೆಟ್ಟಿಯನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ತನ್ನ ಹೆಂಡತಿಗೆ ಕಳುಹಿಸಲಾದ ಬೆದರಿಕೆ ಸಂದೇಶದ ಸ್ಕ್ರೀನ್ ಷಾಟ್ ಅನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ..
ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಮೇಸೆಜ್ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದರು. ಅಲ್ಲದೇ, ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಕೂಡಾ ಮಾಡಿದ್ದರು. ಈ ಸಂಬಂಧ ನಿಕಿತ್ ಶೆಟ್ಟಿ ಕೆಲಸ ಮಾಡುತ್ತಿದ್ದ ಕಂಪನಿಯು ತನ್ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದು, ಆರೋಪಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದೆ.