newsics.com
ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಮೈಸೂರು-ದರ್ಭಾಂಗ್ ಎಕ್ಸ್ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.
ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲು ಸಂಖ್ಯೆ 12578 ಮೈಸೂರು-ದರ್ಭಾಂಗ ಬಾಗಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಲೂಪ್ ಲೈನ್ನಲ್ಲಿ ಪ್ರವೇಶಿಸಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ತಮಿಳುನಾಡು ಪೊಲೀಸರ ಪ್ರಕಾರ, ರೈಲಿನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ತಂಡಗಳು ಮತ್ತು ಆಂಬುಲೆನ್ಸ್ಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. 12578 ಮೈಸೂರು-ದರ್ಭಾಂಗ ಎಕ್ಸ್ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ 8.50ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೈಋತ್ಯ ರೈಲ್ವೆ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದ್ದು, 9731143981 ಅಥವಾ 139ಗೆ ಕರೆ ಮಾಡಬಹುದು ಎಂದು ತಿಳಿಸಿದೆ.
https://twitter.com/i/status/1844776071893237877
https://twitter.com/i/status/1844784450363658429
ಜಂಬೂ ಸವಾರಿ ರೂಟ್ ಮ್ಯಾಪ್ ಹೇಗಿದೆ?; ಏನೆಲ್ಲಾ ವಿಶೇಷತೆ ಇರುತ್ತೆ..?
Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!