ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ
newsics.com ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದೆ. ಮಧ್ಯಾಹ್ನ 1:41 ರಿಂದ 2:10ರವರೆಗೆ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳ ಸಾಗಲಿವೆ.
Copy and paste this URL into your WordPress site to embed
Copy and paste this code into your site to embed