ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ

newsics.com ಶಿರಸಿ(ಉತ್ತರ ಕನ್ನಡ): ಶಿರಸಿಯ ಮಾರಿಕಾಂಬಾ ದೇವಾಲಯದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ದೇವಾಲಯದ ಮುಖ್ಯ ದ್ವಾರದಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ಉಡುಗೆ ತೊಡುಗೆಯ ಸೂಚನೆಗಳ ಬೋರ್ಡ್ ಹಾಕಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು. ಈಗ ಮಾರಿಕಾಂಬಾ ದೇವಸ್ಥಾನದಲ್ಲೂ ವಸ್ತ್ರಸಂಹಿತೆ ಜಾರಿ‌ ಮಾಡಲಾಗಿದೆ. ಭಕ್ತರು ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ಮಾರಿಕಾಂಬಾ ದೇವಿಯ ದರ್ಶನ ಪಡೆಯುವಂತೆ‌ ರಾಜ್ಯ ಮುಜರಾಯಿ ಇಲಾಖೆ ಆದೇಶಿಸಿದೆ. ಶಿರಸಿ ಸೇರಿ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲಾಗಿದೆ. ನವರಾತ್ರಿ ನಿಮಿತ್ತ ಹೆಚ್ಚು … Continue reading ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ