newsics.com
ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಮದುವೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಪ್ರತಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಕರೆದೊಯ್ದು ದಂಧೆ ನಡೆಸುತ್ತಿದ್ದರು.
ಹೊರ ರಾಜ್ಯದ ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್ ಗಳಿಗೆ ಭೇಟಿ ನೀಡ್ತಿದ್ದವರ ಬಳಿ ಈ ಅಮಾಯಕ ಹೆಣ್ಣುಮಕ್ಕಳನ್ನು ದೂಡುತ್ತಿದ್ದರು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು, ಸದ್ಯ ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ.