Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಇಂದು, ಏನೇನು ಕಾರ್ಯಕ್ರಮ?
ಕರ್ನಾಟಕಪ್ರಮುಖ

ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಇಂದು, ಏನೇನು ಕಾರ್ಯಕ್ರಮ?

Share
2 Min Read
SHARE

newsics.com

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಇಂದು ಶನಿವಾರ(ಅ.12) ವಿ‍ಶ್ವವಿಖ್ಯಾತ ಮೈಸೂರು ದಸರಾದ ಅದ್ಧೂರಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ನವರಾತ್ರಿಯ ಕೊನೆಯ ದಿನ ವಿಜಯದಶಮಿಯಂದು ಈ ಐತಿಹಾಸಿಕ ಮೆರವಣಿಗೆ ನಡೆಯುವುದು ಪದ್ಧತಿ.

ಶನಿವಾರ ಬೆಳಗ್ಗೆ 9.45ಕ್ಕೆ ಪೂಜಾ ವಿಧಾನಗಳು ಆರಂಭವಾಗಲಿವೆ. ಈ ಸಂದರ್ಭದಲ್ಲಿ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವಿನೊಂದಿಗೆ ದೇವರನ್ನು ಅರಮನೆಗೆ ಕರೆತರಲಾಗುತ್ತದೆ. ಬೆಳಗ್ಗೆ 10.15ಕ್ಕೆ ಉತ್ತರ ಪೂಜೆಯ ಬಳಿಕ ಆನೆ ಬಾಗಿಲಿನ ಮುಂಭಾಗದಲ್ಲಿ ಜಟ್ಟಿ ಕಾಳಗ ನಡೆಯಲಿದೆ.

11.20ರಿಂದ 11.45ರವರೆಗೆ ಆನೆ ಬಾಗಿಲನ ಮೂಲಕ ವಿಜಯಯಾತ್ರೆ ಹೊರಡುವ ಕನ್ನಡಾಂಬೆ ದೇವಾಲಯದ ಒಳಭಾಗದಲ್ಲಿರುವ ಬನ್ನಿ ಮರಕ್ಕೆ ಯದುವೀರ್‌ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ರಾಜವಂಶಸ್ಥರು ಮನೆಗೆ ಮರಳುವ ಮೂಲಕ ನವರಾತ್ರಿಯ 10 ದಿನದ ಧಾರ್ಮಿಕ ಕಾರ್ಯಗಳು ಪೂರ್ಣಗೊಳ್ಳಲಿವೆ.
ಮಧ್ಯಾಹ್ನ 1.44ರಿಂದ 2.10ರ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಹಾಗೂ ಗಣ್ಯರು ಪೂಜೆ ಸಲ್ಲಿಸಿದ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ದೊರೆಯುತ್ತದೆ. ಆ ಬಳಿಕ ನಾಡಿನ ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಿಂಬಿಸುವ ಸುಮಾರು 51 ಸ್ತಬ್ಧಚಿತ್ರಗಳು ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ.

ಸಂಜೆ 4 ಗಂಟೆಯಿಂದ 4.30ರೊಳಗಿನ ಶುಭ ಕುಂಭಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಸರ್ವಾಲಂಕಾರಭೂಷಿತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುತ್ತಾರೆ. ಇದರೊಂದಿಗೆ ಜಂಬೂಸವಾರಿ ಪ್ರಾರಂಭವಾಗುತ್ತದೆ.

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆಯೊಂದಿಗೆ ಗಜಪಡೆ ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀಗೂ ಹೆಚ್ಚು ದೂರ ಸಾಗಲಿದೆ. ಮೆರವಣಿಗೆಯಲ್ಲಿ ಆಕರ್ಷಕ ಸ್ತಬ್ದಚಿತ್ರಗಳು, ಕಲಾತಂಡಗಳ ಜೊತೆಗೆ ಕರ್ನಾಟಕ ಪೊಲೀಸ್‌ ವಾದ್ಯ ತಂಡ, ಅಶ್ವದಳ, ಎನ್.ಸಿ.ಸಿ, ಕೆಎಸ್ಆರ್‌ಪಿ ತುಕಡಿಗಳು ಇರಲಿವೆ.

ಜಂಬೂಸವಾರಿ ಮೆರವಣಿಗೆ ಅರಮನೆಯಿಂದ ಹೊರಟು ಅರಮನೆಯ ಉತ್ತರ ದ್ವಾರ, ಕೆ.ಆರ್.ಸರ್ಕಲ್‌, ಸಯ್ಯಾಜಿರಾವ್‌ ರಸ್ತೆ, ಬಂಬೂ ಬಜಾರ್‌, ಹೈವೇ ಸರ್ಕಲ್‌ ಮೂಲಕ ಬನ್ನಿಮಂಟಪ ತಲುಪುತ್ತದೆ.
ಸಂಜೆ 7 ಗಂಟೆಗೆ ಆಕರ್ಷಕ ಪಂಜಿನ ಕವಾಯತು ಪ್ರದರ್ಶನ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಪಂಜಿನ ಕವಾಯತು ವೀಕ್ಷಿಸಿ, ವಂದನೆ ಸ್ವೀಕರಿಸಲಿದ್ದಾರೆ. ಇದರೊಂದಿಗೆ ದಸರಾ ಸಂಪನ್ನಗೊಳ್ಳಲಿದೆ.

https://www.instagram.com/reel/DA_zkhAI6Vp/?igsh=MTUzcWl4MzNvOGVxcA==

ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?

TAGGED:what is the program?World famous Mysore Jamboosawari today
Share This Article
Facebook Twitter Copy Link Print
Previous Article 1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ
Next Article ಶುಭೋದಯ‌… ಇಂದಿನ ಪಂಚಾಂಗ, 12-10-2024, ಶನಿವಾರ, ವಿಜಯದಶಮಿ, ಮೈಸೂರು ಜಂಬೂಸವಾರಿ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?