newsics.com
ಮಧ್ಯಪ್ರದೇಶ: ಗೀತಾ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಛತಾರ್ಪುರ್ ಜಿಲ್ಲೆಯ ಬಳಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕಾರ್ಯಪ್ರವೃತ್ತಗೊಂಡ ಇಲಾಖೆ ಅದನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಆದರೂ ಕೂಡ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಇಲಾಖೆಯ ಸಿಬ್ಬಂದಿ ತಿಳಿಸಿದೆ.
ಬೆಳಗ್ಗೆ 7.30ರ ಸುಮಾರಿಗೆ ರೈಲಿನ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಶಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಯೇ ಈ ಒಂದು ದುರಂತ ಸಂಭವಿಸಿದೆ. ಈ ಒಂದು ಘಟನೆಯಿಂದಾಗಿ ಟ್ರೇನ್ನ ಪ್ರಯಾಣ ಒಂದು ಗಂಟೆ ವಿಳಂಬವಾಗಿ ನಡೆದಿದೆ.