Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಹಾದಿಯಲ್ಲೇ ಖರ್ಗೆ ಕುಟುಂಬ: KIADBಗೆ ವಿವಾದಿತ 5 ಎಕರೆ ಭೂಮಿ ಮರಳಿಸಿದ ಸಿದ್ಧಾರ್ಥ ಟ್ರಸ್ಟ್
ಕರ್ನಾಟಕಪ್ರಮುಖ

ಸಿಎಂ ಹಾದಿಯಲ್ಲೇ ಖರ್ಗೆ ಕುಟುಂಬ: KIADBಗೆ ವಿವಾದಿತ 5 ಎಕರೆ ಭೂಮಿ ಮರಳಿಸಿದ ಸಿದ್ಧಾರ್ಥ ಟ್ರಸ್ಟ್

Share
2 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 14 ಮುಡಾ ನಿವೇಶನಗಳನ್ನು ವಾಪಸ್ ಕೊಟ್ಟ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರು ಸದಸ್ಯರಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದಲೂ 5 ಎಕರೆ ಭೂಮಿಯನ್ನು ಕೆಐಎಡಿಬಿ ಸಂಸ್ಥೆಗೆ ವಾಪಸ್‌ ನೀಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ ಟ್ರಸ್ಟ್‌ನಿಂದ ಒಂದೇ ಕಾರಣಕ್ಕೆ, ಒಂದೇ ಸಂಸ್ಥೆಯಿಂದ ಎರಡು ಬಾರಿ ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಎನ್.ಆರ್. ರಮೇಶ್ ಅವರು ಲೋಕಾಯುಕ್ತಗೆ ದೂರು ನೀಡಿದ್ದರು.

ಈ ಪ್ರಕರಣದಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಸದಸ್ಯರಾದ ಖರ್ಗೆ ಕುಟುಂಬದ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ ಖರ್ಗೆ, ರಾಹುಲ್ ಎಂ. ಖರ್ಗೆ, ರಾಧಾಬಾಯಿ ಎಂ. ಖರ್ಗೆ ಹಾಗೂ ಖರ್ಗೆ ಅವರ ಅಳಿಯ ರಾಧಾಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿತ್ತು. ಅಲ್ಲದೇ ಭೂಮಿ ಹಂಚಿಕೆ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಐಎಎಸ್ ಅಧಿಕಾರಿ ಡಾ.ಎಸ್. ಸೆಲ್ವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ತನಿಖೆ ಆರಂಭಕ್ಕೂ ‌ಮುನ್ನವೇ ಕೆಐಎಡಿಬಿಯಿಂದ ಪಡೆದಿದ್ದ ಭೂಮಿಯನ್ನು ಸಿದ್ದಾರ್ಥ ವಿಹಾರ ಟ್ರಸ್ಟ್‌ ವಾಪಸ್ ನೀಡಿದೆ.

ಈ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ತರಾತುರಿಯಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಆಗಿಲ್ಲ. ಬಿಜೆಪಿ ಅವರು ಸುಮ್ಮನೆ ಆರೋಪ ಮಾಡಿದ್ದರು. ರಾಹುಲ್ ಖರ್ಗೆ ಬಗ್ಗೆ ಬಿಜೆಪಿ ಅವರಿಗೆ ಅರಿವಿರಲಿಲ್ಲ. ಅರಿವು ಬಂದ ಕೂಡಲೇ ಬಿಜೆಪಿಯವರು ಮಾತನಾಡುವುದು ಬಿಟ್ಟಿದ್ದಾರೆ. ಏರೋ ಸ್ಪೇಸ್‌ನಲ್ಲಿ ಸ್ಕಿಲ್ ಡೆವಲಪ್ಮೆಂಟ್ ಮಾಡಬೇಕು ಎಂಬ ಆಸೆ ಇತ್ತು. ಹೀಗಾಗಿ ಅರ್ಜಿ ಹಾಕಿದ್ದರು. ಮೇ 30ಕ್ಕೆ ಅರ್ಹತೆ ಆಧಾರದಲ್ಲಿ ನಿವೇಶನ ಹಂಚಿಕೆ ಆಗಿತ್ತು. ಎಲ್ಲಾ ದಾಖಲಾತಿ ಇದೆ. ಡಿಆರ್‌ಡಿಒ, ಅಗ್ನಿ ಅವಾರ್ಡ್ ಪಡೆದ ರಾಹುಲ್ ಸ್ಕಿಲ್ ಡೆವಲಪ್ಮೆಂಟ್ ಮಾಡಲು ಹೊರಟಿದ್ದರು.

ರಾಹುಲ್ ಮೃದು ಸ್ವಭಾವದವರು. ಸೆಪ್ಟೆಂಬರ್ 20 ರಂದೇ ಸೈಟ್ ವಾಪಸ್ ನೀಡಿದ್ದಾರೆ. ಕೆಐಎಡಿಬಿ ಸಿಇಒಗೆ ಪತ್ರ ಬರೆದು ನಿವೇಶನ ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿದ್ದ 5 ಎಕರೆ ಸಿಎ ನಿವೇಶನ ಹಂಚಿಕೆ ಕಾನೂನು ಪ್ರಕಾರವೇ ಆಗಿದೆ. ಆದರೂ ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಹೀಗಾಗಿ ಇದನ್ನು ವಾಪಸ್ ನೀಡುವುದಾಗಿ ತಿಳಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್

ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ

ಅಕ್ಕನ ಬಳಿ ಬಂದ್ರೆ ತಂಗಿನೂ ಫ್ರೀ : ಇಬ್ಬರಿಗೂ ಒಬ್ಬನೇ ಬಾಯ್ಫ್ರೆಂಡ್ ಬೇಕಂತೆ…

ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!

TAGGED:Kharge family on CM path: Siddhartha Trust returned disputed 5 acres of land to KIADB
Share This Article
Facebook Twitter Copy Link Print
Previous Article ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ
Next Article ಶುಭ ದಿನ‌… ರಾಶಿ ಭವಿಷ್ಯ, 14-10-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?