newsics.com
ರಾಯಚೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ.
ಮೃತರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್, ಸಕ್ಸ್, ಮಕ್ಬುಲ್ ಎಂದು ತಿಳಿದು ಬಂದಿದೆ.
ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.