newsics.com
ಬೆಂಗಳೂರು : ನಟಿಸಿದ್ದ ಓವಿಯಾ ಅವರದ್ದು ಎನ್ನಲಾಗಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು.
ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದೆಲ್ಲಾ ಕಮೆಂಟ್ ಮಾಡಿದ್ದ ನಟಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಿಡಿಯೋ ವೈರಲ್ ಆದಾಗ ನೋಡಿ ಎಂಜಾಯ್ ಮಾಡಿ ಎಂದೆಲ್ಲಾ ಕಮೆಂಟ್ ಮಾಡಿದ್ದ ನಟಿ ಓವಿಯಾ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಸಂಬಂಧ ನಟಿ ಓವಿಯಾ ಅವರು ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದಾರೆ ಎಂದು ನಟಿಯ ಮ್ಯಾನೇಜರ್ ಹೇಳಿದ್ದಾರೆ.
ಚೆನ್ನೈ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. “ಇದು ಓವಿಯಾ ಹೆಸರು ಕೆಡಿಸಲು ಮಾರ್ಫ್ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ಗೆ ವಿಷಯ ತಿಳಿಸಿದ್ದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಓವಿಯಾ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.