ತಿರುಪತಿಯಲ್ಲಿ ಭಾರೀ‌ ಮಳೆ: ತಿಮ್ಮಪ್ಪನ ದೇಗುಲ ಸುತ್ತ ಪ್ರವಾಹ ಪರಿಸ್ಥಿತಿ

newsics.com ತಿರುಪತಿ: ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದೇವಸ್ಥಾನದ ಸುತ್ತಮುತ್ತ, ಮೇಡ ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಭಾರೀ ಮಳೆಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರನ್ನು ಅಧಿಕಾರಿಗಳು ಶೆಡ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ. ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಿರುಮಲದ ಆಧ್ಯಾತ್ಮಿಕ ಮಂದಿರದಲ್ಲಿ ಭಾನುವಾರ ಬೆಳಗಿನ ಜಾವದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. … Continue reading ತಿರುಪತಿಯಲ್ಲಿ ಭಾರೀ‌ ಮಳೆ: ತಿಮ್ಮಪ್ಪನ ದೇಗುಲ ಸುತ್ತ ಪ್ರವಾಹ ಪರಿಸ್ಥಿತಿ