newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಅ.15, 16ರಂದು ಎಸ್ಸಿಒ ಶೃಂಗಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನದಾದ್ಯಂತ ಎರಡು ದಿನಗಳ ಲಾಕ್ಡೌನ್ ಘೋಷಿಸಲಾಗಿದೆ.
ದೇಶ- ವಿದೇಶಗಳ ಗಣ್ಯರ ಭದ್ರತೆ ಹಿನ್ನೆಲೆಯಲ್ಲಿ ಈ ಲಾಕ್ಡೌನ್ ಘೋಷಿಸಲಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮದುವೆಗಳಿಗೂ ನಿಷೇಧ ಹೇರಲಾಗಿದೆ.
ಭಾರತದಿಂದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಮ್ರಾನ್ ಖಾನ್ ಅವರ ಪಕ್ಷದ ಬೆಂಬಲಿಗರ ಇತ್ತೀಚಿನ ಭಯೋತ್ಪಾದಕ ದಾಳಿಗಳು ಮತ್ತು ರಾಜಕೀಯ ಪ್ರತಿಭಟನೆಗಳಿಂದಾಗಿ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮಿಲಿಟರಿ ನಿಯಂತ್ರಣದಲ್ಲಿ ಭದ್ರತೆಯನ್ನಿರಿಸಲು ಪಾಕಿಸ್ತಾನದ ಸರ್ಕಾರ ನಿರ್ಧರಿಸಿದೆ.
ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ನಿಯೋಜಿಸಲಾಗಿದೆ.
ಅಕ್ಟೋಬರ್ 12ರಿಂದ 16ರವರೆಗೆ ಎರಡೂ ನಗರಗಳಲ್ಲಿ ಮದುವೆ ಹಾಲ್ಗಳು, ಕೆಫೆಗಳು, ರೆಸ್ಟೋರೆಂಟ್ಗಳು ಮತ್ತು ಸ್ನೂಕರ್ ಕ್ಲಬ್ಗಳನ್ನು ಮುಚ್ಚಲು ಆದೇಶಿಸಲಾಗಿದೆ. ವ್ಯಾಪಾರಸ್ಥರು ಹಾಗೂ ಹೊಟೇಲ್ ಮಾಲೀಕರು ಇದನ್ನು ಪಾಲಿಸದಿದ್ದರೆ ಕಾನೂನು ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಬಿಕ್ಕಟ್ಟು ಉಲ್ಬಣ: ಕೆನಡಾದ 6 ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ
ಬಿಗ್ ಬಾಸ್ ಫ್ಯಾನ್ಸ್ಗೆ ಶಾಕ್.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?