newsics.com
ಬಿಗ್ ಬಾಸ್ ಕನ್ನಡ ಸೀಸನ್ 9ರ ಸ್ಪರ್ಧಿ ರೂಪೇಶ್ ರಾಜಣ್ಣ, ಕಿಚ್ಚ ಸುದೀಪ ಬಿಗ್ ಬಾಸ್ ನಿರೂಪಣೆಯಿಂದ ಹೊರನಡೆಯಲು ತೀರ್ಮಾನಿಸಿದ್ದರ ಹಿಂದೆ ಬೇರೆಯದ್ದೇ ವಿಷಯ ಇದೆ ಎಂದಿದ್ದಾರೆ. ಸುದೀಪರಿಗೆ ಅವಮಾನ ಆಗಿದೆ ಎಂಬರ್ಥದ ಪೋಸ್ಟ್ ಅನ್ನು ಅವರು ಹಂಚಿಕೊಂಡಿದ್ದರು. ಈಗ ಇದಕ್ಕೆಲ್ಲ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಎಲ್ಲಾ ವಿವಾದಗಳಿಗೆ ಕಿಚ್ಚ ತೆರೆ ಎಳೆದಿದ್ದಾರೆ.

ನನ್ನ ಒಂದು ಟ್ವೀಟ್ ಗೆ ನೀವು ಸ್ಪಂದಿಸಿರುವ ರೀತಿಗೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ನಾನು ಮೆಚ್ಚುತ್ತೇನೆ. ಇದು ನನಗೆ ತುಂಬಾ ಸಂತಸವನ್ನುಂಟು ಮಾಡಿದೆ. ಆದರೆ ನನ್ನ ಹಾಗೂ ಚಾನೆಲ್ ನಡುವೆ ಏನೋ ಸಂಘರ್ಷವಾಗಿದೆ ಎಂದು ಹರಿದಾಡುತ್ತಿರುವ ವಿಡಿಯೋ ಹಾಗೂ ಪ್ರತಿಕ್ರಿಯೆಗಳನ್ನು ಸೃಷ್ಟಿಸುತ್ತಿರುವವರಿಗೆ ನಾನು ಕೇಳಿಕೊಳ್ಳುವುದು ಇಷ್ಟೆ. ನಾವು ಒಂದು ದೀರ್ಘವಾದ ಹಾಗೂ ಧನಾತ್ಮಕ ಪ್ರಯಾಣವೊಂದನ್ನು ಮಾಡಿದ್ದೇವೆ. ಇದರಲ್ಲಿ ಒಬ್ಬರಿಗೊಬ್ಬರು ಅಗೌರವದಿಂದ ನಡೆದುಕೊಳ್ಳುವ ಪ್ರಶ್ನೆಯೇ ಹುಟ್ಟುವುದಿಲ್ಲ. ಇದರ ಸುತ್ತ ಹುಟ್ಟುತ್ತಿರುವ ಊಹೆಗಳು ಸುಳ್ಳುಗಳಿಂದ ಕೂಡಿವೆ ಮತ್ತು ಮಾಹಿತಿ ಕೊರತೆಯಿಂದ ಕೂಡಿವೆ .
ನನ್ನ ಒಂದು ಟ್ವೀಟ್ ಅತ್ಯಂತ ಪ್ರಾಮಾಣಿಕವಾಗಿದ್ದು. ನನ್ನ ಮತ್ತು ಕಲರ್ಸ್ ಕನ್ನಡದ ನಡುವಿನ ಸಂಬಂಧ ಒಂದು ಅದ್ಭುತವಾದದ್ದು. ಅವರು ನನ್ನನ್ನು ತುಂಬಾ ಗೌರವದಿಂದ ನಡೆಸಿಕೊಂಡಿಂದ್ದಾರೆ. ಡೈರೆಕ್ಟರ್ ಪ್ರಕಾಶ್ ಒಬ್ಬ ಅದ್ಭುತ ಪ್ರತಿಭೆ ಹೊಂದಿರುವ ವ್ಯಕ್ತಿ. ಅವರ ಬಗ್ಗೆ ನನಗೆ ತುಂಬಾ ಗೌರವವಿದೆ
. ನನ್ನೊಂದಿಗೆ ಕೆಲಸ ಮಾಡಿದವರು ಯಾವುದೋ ಅಪವಾದವನ್ನು ಎದುರಿಸುತ್ತಿರುವಾಗ ನಾನು ಹಿಂದೆ ಕುಳಿತುಕೊಂಡು ನೋಡುತ್ತಾ ಸಂಭ್ರಮಿಸುವವರ ಪಟ್ಟಿಗೆ ಸೇರಿದ ವ್ಯಕ್ತಿ ಅಲ್ಲ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಸುದೀಪ್ ತೆರೆ ಎಳೆದಿದ್ದಾರೆ.