newsics.com
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ-ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯ ಬಳಿಕ ಈ ಬೆಳವಣಿಗೆ ನಡೆದಿದೆ.
ಪೊಲೀಸ್ ಬೆಂಗಾವಲು ವಾಹನ ಈಗ ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಇನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಗಾರಿಕೆಯನ್ನು ವಹಿಸಿಕೊಂಡ ನಂತರ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಫಾರ್ಮ್ ಹೌಸ್ ಒಳಗೆ ಮತ್ತು ಹೊರಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಫಾರ್ಮ್‌ಹೌಸ್ ಸುತ್ತಲೂ ಚಲಿಸುವ ವಾಹನಗಳನ್ನು ಪರಿಶೀಲಿಸುತ್ತಿದ್ದಾರೆ.