newsics.com
ಮುಂಬೈ: ತನ್ನ ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಅಪ್ರಾಪ್ತನನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸ್ನೇಹಿತನ ಹೆಸರಿನಲ್ಲಿ ಸೋಷಿಯಲ್ ಮೀಡಿಯಾ ನಕಲಿ ಖಾತೆ ತೆರೆದು, ಇದೇ ಅಕ್ಟೋಬರ್ 14ರಂದು ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ ಕಳುಹಿಸಿದ್ದಕ್ಕಾಗಿ ಅಪ್ರಾಪ್ತನನ್ನ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಂಧಿತ ಅಪ್ರಾಪ್ತನು ತನ್ನ ಸ್ನೇಹಿತನೊಂದಿಗೆ ಹಣದ ವಿಚಾರಕ್ಕೆ ಜಗಳವಾಡಿಕೊಂಡಿದ್ದ. ಅವನ ಮೇಲೆ ಸೇಡು ತೀರಿಸಿಕೊಳ್ಳಬೇಕೆಂದು ನಕಲಿ ಎಕ್ಸ್ ಖಾತೆಯೊಂದನ್ನ ತೆರೆದು, ಅದರಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ.