newsics.com
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿಂದ ಬುಧವಾರ ಬಿಡುಗಡೆಯಾದರು.
ನೆಚ್ಚಿನ ನಾಯಕ ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರು ಸಂಭ್ರಮಿಸಿದರು. ನಾಯಕನನ್ನು ಮೇಲೆತ್ತಿ ಕುಣಿದರು. ಹೂವಿನ ಹಾರ ಹಾಕಿ, ಬೂದಗುಂಬಳ ಹೊಡೆದು ಸಂಭ್ರಮಾಚರಿಸಿದರು.
ವಾಲ್ಮೀಕಿ ನಿಗಮ ಕೇಸ್‌ನಲ್ಲಿ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.