newsics.com
ಕಲಬುರಗಿ: ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮೌಲಾಬಿ (50) ಎಂದು ಗುರುತಿಸಲಾಗಿದೆ.